ಪೊಲೀಸ್ ಇಲಾಖೆಯಲ್ಲಿ ಕೇಸರಿಕರಣ ವಿರುದ್ಧ ಡಿಕೆಶಿ ಎಚ್ಚರಿಕೆ ಖಂಡನೀಯ, ಇಂತಹ ಆಸಂಬಂಧ ಹೇಳಿಕೆ ಪೊಲೀಸರ ನೈತಿಕ ಸ್ಥೈರ್ಯ ಕುಂದಿಸಿದಂತಾಗುತ್ತದೆ.
ಬೆಂಗಳೂರು:- ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದಂತ ಸಭೆಯಲ್ಲಿ ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡುವುದಕ್ಕೆ ನಾವು ಬಿಡುವುದಿಲ್ಲ ಎಂಬುದಾಗಿ ಎಚ್ಚರಿಕೆ ನೀಡಿದ್ದರು. ಇಂತಹ ಅವರ ಹೇಳಿಕೆ ಬಗ್ಗೆ ಇದು ಖಂಡನೀಯ ನಡೆ ಎಂಬುದಾಗಿ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಪೋಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಕುರಿತು, ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಅವರು, ಇಲಾಖೆಯಲ್ಲಿ ಕೇಸರೀಕರಣ ವಿರುದ್ಧ ಎಚ್ಚರಿಕೆ ನೀಡಿರುವುದು ಅತ್ಯಂತ ಅಸಮರ್ಥನೀಯ ಹಾಗೂ ಖಂಡನೀಯವಾಗಿದೆ ಎಂದು ತಿಳಿಸಿದ್ದಾರೆ.
ಇಡೀ ರಾಷ್ಟ್ರದಲ್ಲಿಯೇ ನಮ್ಮ ರಾಜ್ಯದ, ಪೊಲೀಸ್ ವ್ಯವಸ್ಥೆ ಅತ್ಯಂತ ದಕ್ಷ ಹಾಗೂ ಶಿಸ್ತಿನ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದ್ದು, ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸುತ್ತಿದೆ. ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಸಚಿವರು ಸಿಬ್ಬಂದಿಗಳ ನೈತಿಕ ಸ್ಥೈರ್ಯ ಕುಂದಿಸುವ ಪ್ರಯತ್ನ ಮಾಡಬಾರದು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



