ಚರಂಡಿ ಸ್ವಚ್ಛಗೊಳಿಸುವ ವೇಳೆ ವಿಷಗಾಳಿ ಸೇವಿಸಿ ಇಬ್ಬರು ಪೌರ ಕಾರ್ಮಿಕರು ಮೃತ್ಯು.

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಪೌರ ಕಾರ್ಮಿಕರಾದ ದುಂಡಪ್ಪ(45), ನಾಗಪ್ಪ(42) ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಹಿನ್ನೆಲೆ ಬಸವನಕೋಟೆ ಗ್ರಾಮ ಪಂಚಾಯತ್ ಪಿಡಿಒ ಶಶಿಧರ್‌ ಪಾಟೀಲ್ ಎಂಬುವವರು ಗ್ರಾಮ ಪಂಚಾಯತ್‌ಗೆ ಸೇರಿದ ಚರಂಡಿ ಸ್ವಚ್ಛಗೊಳಿಸಲು ಆದೇಶ ನೀಡಿದ್ದರು. ಇದರಿಂದ ಬಹುದಿನಗಳಿಂದ ತುಂಬಿ ತುಳುಕುತ್ತಿದ್ದ ಚರಂಡಿಯ ಸ್ವಚ್ಚತೆಗೆ ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಮೃತ ಕಾರ್ಮಿಕರು ಮುಂದಾಗಿದ್ದರು. ಹೀಗೆ ಚರಂಡಿ ಸ್ವಚ್ಚಗೊಳಿಸುವಾಗ ವಿಷ ಗಾಳಿ ಸೇವಿಸಿ ಅಸ್ವಸ್ಥರಾದ ಕಾರ್ಮಿಕರನ್ನು ಹತ್ತಿರದ ಅರಸೀಕೆರೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಿ ಬಳಿಕ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು‌ ಪೌರಕಾರ್ಮಿಕರು ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *