ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಇ.ಡಿ ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್
ತುಮಕೂರು:ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು ತನಿಖೆ ನಡೆಸುವ ಅಧಿಕಾರವಿದೆ. ಇ.ಡಿ ಅವರು ಅವಶ್ಯಕತೆ ಇರದಿದ್ದರೂ ಬಂದಿದ್ದಾರೆ” ಎಂದು ಹೇಳಿದರು.
ಎಸ್ ಐಟಿ ರಚನೆ ಮಾಡಿದರೂ ಇ.ಡಿ ತನಿಖೆ ನಡೆಸಲು ಮುಂದುವರೆಯುತ್ತಿದೆ ಎಂದು ಕೇಳಿದಾಗ “ಇದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ನಾಗೇಂದ್ರ ಅವರದ್ದು ಯಾವುದೇ ತರದ ತಪ್ಪಿಲ್ಲ. ಕಳಂಕರಹಿತರಾಗಿ ಪ್ರಕರಣದಿಂದ ಹೊರಗಡೆ ಬರುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದರು.
“ಈ ಹಿಂದೆ ಬಿಜೆಪಿ ಕಾಲದಲ್ಲಿಯೂ ಇಂತಹ ಪ್ರಕರಣ ನಡೆದಿರುವ ಉದಾಹರಣೆಗಳಿವೆ. ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಪ್ರಕರಣ ಆಗಬಾರದಾಗಿತ್ತು, ನಡೆದು ಹೋಗಿದೆ” ಎಂದು ಹೇಳಿದರು.
ನಾಗೇಂದ್ರ ಅವರ ಮನೆ ಸೇರಿದಂತೆ ನಾಲ್ಕೈದು ಕಡೆ ಇಡೀ ದಾಳಿ ಮಾಡಿದೆ ಎನ್ನುವ ಪ್ರಶ್ನೆಗೆ “ಇದರ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ನಾಗೇಂದ್ರ ಅವರು ಹಾಗೂ ದದ್ದಲ್ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ. ನಾವು ಆಂತರಿಕವಾಗಿ ಎಲ್ಲಾ ರೀತಿಯಲ್ಲಿ ತನಿಖೆ ಮಾಡಿದ್ದೇವೆ. ಹಗರಣದಲ್ಲಿ ನಮ್ಮ ಶಾಸಕರ, ಸಚಿವರ ಕೈವಾಡ ಇಲ್ಲ ಎಂಬುದನ್ನ ಅವರು ನಮಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅವರು ಏನೇ ಕೇಳಿದರೂ ಉತ್ತರ ಕೊಡುತ್ತಾರೆ” ಎಂದು ತಿಳಿಸಿದರು.
ನಾನು ಮಠಕ್ಕೆ ಬರುವುದು ಸಹಜ
ನೊಣವಿನಕೆರೆ ಮಠಕ್ಕೆ ಭೇಟಿ ಕೊಟ್ಟ ವಿಚಾರವಾಗಿ ಕೇಳಿದಾಗ “ನಾನು ನೊಣವಿನಕೆರೆ ಮಠಕ್ಕೆ ಬರೋದು ಸಹಜ. ಇದು ನನ್ನ ನಂಬಿಕೆ ಮತ್ತು ವಿಚಾರ” ಎಂದರು.
ಹಂದನಕೆರೆ ಮಠಕ್ಕೆ ಭೇಟಿ ನೀಡಿದ ಬಗ್ಗೆ ಕೇಳಿದಾಗ “ನಾನು ಮಠಕ್ಕೆ ಹೋಗಿರಲಿಲ್ಲ. ಅಲ್ಲಿ ಗವಿ ಸಿದ್ದೇಶ್ವರ ಬೆಟ್ಟಕ್ಕೆ ರಸ್ತೆ ಮಾಡಿಸಿದ್ದೆ. ಅರಣ್ಯ ಇಲಾಖೆಯಿಂದ ತೊಂದರೆ ಇದ್ದ ಕಾರಣಕ್ಕೆ, ಯಾವ ರೀತಿಯ ತೊಂದರೆ ಎದುರಾಗಿದೆ ಎಂದು ತಿಳಿಯಲು ನಾನೇ ಭೇಟಿ ನೀಡಿದ್ದೇ” ಎಂದು ಹೇಳಿದರು.
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ
ಚನ್ನಪಟ್ಟಣ ಕ್ಷೇತ್ರಕ್ಕೆ ನೀವು ಅಭ್ಯರ್ಥಿಯಾಗುತ್ತೀರಾ ಎನ್ನುವ ಚರ್ಚೆ ನಡೆಯುತ್ತಿದೆ ಎಂದಾಗ “ಚನ್ನಪಟ್ಟಣದಲ್ಲಿ ಯಾರೇ ನಿಂತರು ನಾನೇ ಅಭ್ಯರ್ಥಿ ಅಲ್ಲವೇ?” ಎಂದು ಮಾರ್ಮಿಕವಾಗಿ ಉತ್ತರಿಸಿದರು
ವರದಿ :ಅಪೂರ್ವ ಸಾಗರ
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555


