ದಾವಣಗೆರೆ : ಪೊಲೀಸ್ ಠಾಣೆ ಮುಂದೆ ಕುಡಿದ ಮತ್ತಿನಲ್ಲಿ ಯುವತಿಯರ ಹೈಡ್ರಾಮಾ ; ನಾಲ್ವರ ಬಂಧನ.!
ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ಮಾಡಿದ ಮುಂಬೈ ಮೂಲದ ಇಬ್ಬರು ಯುವತಿಯರು ಸೇರಿ ನಾಲ್ವರನ್ನು ಬಂಧಿಸಿದ (Arrested) ಘಟನೆ ನಡೆದಿದೆ.
ಮುಂಬೈ ಮೂಲದ ಇಬ್ಬರು ಯುವತಿಯರು, ಮಂಜುನಾಥ ಹಾಗೂ ಹರ್ಷ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಕುಡಿದ ಅಮಲಿನಲ್ಲಿದ್ದ ಯುವತಿಯರು ಹಾಗೂ ಜೊತೆಗಿದ್ದವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಓರ್ವ ಪೊಲೀಸ್ ಕಾನ್ಸ್‌ಸ್ಟೇಬಲ್ ಗಾಯಗೊಂಡಿದ್ದಾರೆ.
ಶಿಕಾರಿಪುರ ಮೂಲದ ಮಂಜುನಾಥ ಹಾಗೂ ಹರ್ಷ ಎಂಬುವರು ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಮುಂಬೈನಿಂದ ಇಬ್ಬರು ಹುಡುಗಿಯರನ್ನು ಕರೆಯಿಸಿದ್ದರು. ಯುವತಿಯರಿಗೆ ಕೊಡಬೇಕಾದ ಹಣ ಕೊಡದ ಹಿನ್ನೆಲೆಯಲ್ಲಿ ಜಗಳ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಯುವತಿಯರು ಹಾಗೂ ಜೊತೆಗಿದ್ದವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



