ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್.

ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿ ವೈದ್ಯರು ಮತ್ತು ಸಿಬ್ಬಂದಿಯ ಹಾಜರಾತಿ, ಔಷಧಿಗಳ ಲಭ್ಯತೆ ಮತ್ತು ದಾಸ್ತಾನು ಸೇರಿದಂತೆ ಅಲ್ಲಿನ ಮೂಲಸೌಕರ್ಯ ವ್ಯವಸ್ಥೆಗಳನ್ನು ಆರೋಗ್ಯ ಸಚಿವ ಡಾ.ಸುಧಾಕರ್ ಪರಿಶೀಲಿಸಿದರು.

ರೋಗಿಗಳನ್ನು ಭೇಟಿ ಮಾಡಿ ಅವರಿಗೆ ಆಸ್ಪತ್ರೆಯಲ್ಲಿ ಸಿಗುತ್ತಿರುವ ಚಿಕಿತ್ಸೆ ಹಾಗೂ ಆಹಾರ ಗುಣಮಟ್ಟದ ಬಗ್ಗೆ ವಿಚಾರಿಸಿದರು.

ನಂತರ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಸ್ಪತ್ರೆಯಲ್ಲಿರುವ ಕುಂದು ಕೊರತೆಗಳನ್ನು ಸರಿಪಡಿಸಲು ಸೂಚನೆಗಳನ್ನು ನೀಡಿದರು.

ಇದೇ ವೇಳೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಜಯನಗರ ಜನರಲ್ ಆಸ್ಪತ್ರೆಯ ವೈದ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555

Leave a Reply

Your email address will not be published. Required fields are marked *