🚨 ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಶಿವಮೊಗ್ಗ ಜಿಲ್ಲಾ ಘಟಕದ ಮಾಸಿಕ ಸಭೆ; ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ

🚨 ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಶಿವಮೊಗ್ಗ ಜಿಲ್ಲಾ ಘಟಕದ ಮಾಸಿಕ ಸಭೆ; ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ

ಶಿವಮೊಗ್ಗ: ಕರ್ನಾಟಕ ಮಾನವ ಹಕ್ಕುಗಳ ಸಮಿತಿ (ರಿ), ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾಸಿಕ ಸಭೆ ಹಾಗೂ ಗುರುತಿನ ಚೀಟಿ ವಿತರಣಾ ಸಮಾರಂಭವನ್ನು ಆಯೋಜಿಸಲಾಯಿತು. ಸಭೆಯಲ್ಲಿ ಸಮಿತಿಯ ವಿವಿಧ ಪದಾಧಿಕಾರಿಗಳಿಗೆ ಅಧಿಕೃತ ಗುರುತಿನ ಚೀಟಿಗಳನ್ನು ವಿತರಿಸಲಾಗಿದ್ದು, ಸಂಘಟನೆಯ ಮುಂದಿನ ಕಾರ್ಯಯೋಜನೆಗಳು ಹಾಗೂ ಸಾರ್ವಜನಿಕ ಸೇವಾ ಚಟುವಟಿಕೆಗಳ ಕುರಿತು ಮಹತ್ವದ ಚರ್ಚೆಗಳು ನಡೆಯುವಂತಾಯಿತು.


ಸಭೆಯನ್ನು ದೂರವಾಣಿ ಮೂಲಕ ಉದ್ದೇಶಿಸಿ ಮಾತನಾಡಿದ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ ಗೌಡರು, ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP), ತಾಲ್ಲೂಕಿನ ತಹಶೀಲ್ದಾರರು ಹಾಗೂ ಡಿವೈಎಸ್ಪಿ ಅಧಿಕಾರಿಗಳಿಗೆ ಸಮಿತಿಯ ಪದಾಧಿಕಾರಿಗಳ ಅಧಿಕೃತ ಪಟ್ಟಿಯನ್ನು ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ತಿಳಿಸಿದರು. ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸಮಿತಿಯ ಪಾತ್ರ ಮತ್ತಷ್ಟು ಬಲವಾಗುವ ದಿಸೆಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.


ರಾಜ್ಯ ಉಪಾಧ್ಯಕ್ಷರಾದ ಶ್ರೀ ಪ್ರದೀಪ್ ಮೀತ್ತಲ್ ಅವರು ಸಭೆಯಲ್ಲಿ ಸಮಿತಿಯ ಮುಂದಿನ ಕಾರ್ಯಯೋಜನೆಗಳ ಕುರಿತು ಸುದೀರ್ಘವಾಗಿ ಮಾರ್ಗದರ್ಶನ ನೀಡಿದರು. ಕಳೆದ ತಿಂಗಳಿನಲ್ಲಿ ಸಮಿತಿಗೆ ಬಂದ ಹಲವು ಸಾರ್ವಜನಿಕ ದೂರುಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಿರುವ ಕುರಿತು ಮಾಹಿತಿ ಹಂಚಿಕೊಂಡ ಅವರು, ಸಮಾಜದ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಸಮಿತಿಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.


ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಪ್ರದೀಪ್ ಮೀತ್ತಲ್, ರಾಜ್ಯ ಮಾಧ್ಯಮ ಮುಖ್ಯಸ್ಥರಾದ ಸಿಸೇಲ್ ಪನಯಿಲ್ ಸೋಮನ್, ರಾಜ್ಯ ಸಹ ಕಾರ್ಯದರ್ಶಿ ಗೋಪಿ ಎಂ.ಎಂ., ಜಿಲ್ಲಾಧ್ಯಕ್ಷ ಉಮೇಶ್ ವಿ., ಜಿಲ್ಲಾ ಉಪಾಧ್ಯಕ್ಷರಾದ ರವಿಕುಮಾರ್ ಎ.ಆರ್. ಹಾಗೂ ಜೀವನ ಡಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಪ್ರಕಾಶ್, ನಗರ ಪ್ರಧಾನ ಕಾರ್ಯದರ್ಶಿ ಗೈಭರ್ ಖಾನ್, ಯುವ ಘಟಕದ ಕಾರ್ಯದರ್ಶಿ ಅನಿಲ್ ಆಚಾರ್ಯ, ಜಿಲ್ಲಾ ಮಹಿಳಾ ಅಧ್ಯಕ್ಷೆ ಪ್ರಮೀಳಾ ಕೆ.ಆರ್. ಹಾಗೂ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಡಾ. ಕವಿತಾ ಸಾಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *