ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ.
ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಉಳಿದಂತೆ ರಾಜ್ಯಾದ್ಯಂತ ಇಂದೂ ಕೂಡ ಭಾರೀ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆಯ ನಡುವೆ ವಿಪರೀತ ಬಿಸಿಲು ಇರಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಮಳೆ ನಿಂತಿದ್ದು, ಎಲ್ಲಾ ಕಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655


