“ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಯೋಗಾಥಾನ್ – 2022”

ಮೈಸೂರು: ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಯೋಗಾಥಾನ್ – 2022.

ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ 2022-23ನೇ ಸಾಲಿನಲ್ಲಿ 75ನೇ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ‘ಅಜಾದಿ ಕಾ ಅಮೃತ್ ಮಹೋತ್ಸವ” ಅಂಗವಾಗಿ ಯೋಗಾಥಾನ್ – 2022 ರ ಕಾರ್ಯಕ್ರಮವನ್ನು ಮೈಸೂರಿನ ರೇಸ್ ಕೋರ್ಸ್ನಲ್ಲಿ 2022ರ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9.00 ಗಂಟೆಗೆ ನಡೆಸಲಾಗುವುದು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಇನ್ನಿತರೆ ಇಲಾಖೆಗಳ ಸಹಕಾರದೊಂದಿಗೆ ಯೋಗಾಥಾನ್-2022 ಕಾರ್ಯಕ್ರಮವನ್ನು ಮೈಸೂರು ನಗರದಲ್ಲಿ ಯಶಸ್ವಿಯಾಗಿ ಸಂಘಟಿಸಲು ಈಗಾಗಲೇ ಹಲವಾರು ಬಾರಿ ಸಭೆಗಳನ್ನು ನಡೆಸಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ.

ಯೋಗಾಥಾನ್ ಕಾರ್ಯಕ್ರಮದಲ್ಲಿ ಸುಮಾರು 50000 ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಭಾಗವಹಿಸುವವರ ಹೆಸರುಗಳನ್ನು ಈಗಾಗಲೇ ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *