“ವಜ್ರಖಚಿತ ಸಿಂಹಾಸನ ಜೋಡಣೆ”

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮೈಸೂರು ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್ ಪ್ರಮುಖ ಆಕರ್ಷಣೆ ಆಗಿದ್ದು, ಸೆಪ್ಟೆಂಬರ್ 20 ರಂದು ವಜ್ರಖಚಿತ ಸಿಂಹಾಸನ ಜೋಡಣೆ ಮಾಡಲಾಗುತ್ತದೆ.

ಅಂದು ಬೆಳಗ್ಗೆ 10 ರಿಂದ 1 ಗಂಟೆ ತನಕ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಮೈಸೂರಿನ ಗೆಜ್ಜಗಳ್ಳಿ ಗ್ರಾಮದ ಸಿಂಹಾಸನ ಜೋಡಣೆ ಮಾಡುವ ನುರಿತವರು ಈ ಕಾರ್ಯ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅಂದು ಬೆಳಗ್ಗೆ 10 ರಿಂದ ಮದ್ಯಾಹ 1.30 ಗಂಟೆವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಇನ್ನು ದಸರಾ ಉದ್ಘಾಟನೆ ದಿನವಾದ ಸೆಪ್ಟೆಂಬರ್ 26 ರಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನ ಪೂಜಾ ಕಾರ್ಯ ನಡೆಯುವ ಕಾರಣ ಅಂದು ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ಇರುವುದಿಲ್ಲ
ಮೈಸೂರು ಅರಮನೆಯಲ್ಲಿ ಅಕ್ಟೋಬರ್ 4 ರಂದು ರಾಜವಂಶಸ್ಥ ಯದುವೀರ್ ಅವರ ಆಯುಧ ಪೂಜೆ ಇರುವ ಹಿನ್ನೆಲೆ ಅಂದು ಬೆಳಿಗ್ಗೆ 10 ರಿಂದ 1.30 ಗಂಟೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಗೊಳಿಸಲಾಗಿದೆ.

ಇನ್ನು ಅಕ್ಟೋಬರ್ 5 ರಂದು ಮೈಸೂರು ಅರಮನೆಯಲ್ಲಿ ಯದುವೀರ್ ಅವರ ವಿಜಯದಶಮಿಯ ಪೂಜಾ ಕೈಂಕರ್ಯ ನಡೆಯುವ ಕಾರಣ ಇಡೀ ದಿನ ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ
ಅಂತಿಮವಾಗಿ ಅಕ್ಟೋಬರ್ 20 ರಂದು ಸಿಂಹಾಸನ ವಿಸರ್ಜನೆ ನಡೆಯುವ ಕಾರಣ ಅಂದು ಕೂಡ ಮೈಸೂರು ಅರಮನೆಗೆ ‌ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಗೊಳಿಸಿ ಮೈಸೂರು ಅರಮನೆ ಮಂಡಳಿ ಆದೇಶ ನೀಡಿದೆ.

Leave a Reply

Your email address will not be published. Required fields are marked *