ವಿಜಯಪುರ: 37 ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದ ಸಿಎಂ.

ವಿಜಯಪುರದಲ್ಲಿ ನಡೆಯಲಿರುವ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ಸಮ್ಮೇಳನದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.
ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ಲೋಗೋವನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್ ಠಾಕೂರ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ವಿಜಯಪುರ ಕಾನಿಪ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ ಮುಂತಾದವರು ಉಪಸ್ಥಿತರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

