“ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ”

ಮೈಸೂರು: ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ.

ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.

ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ.

ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.

ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡುಬದಿ ಭಕ್ತಸಮೂಹವೇ ನೆರೆದಿತ್ತು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *