“ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ. ಅಧಿಕಾರಿಗಳ ವಿರುದ್ದ ಕಿಡಿ ಕಾರಿದ ನಿವಾಸಿಗಳು”

ಹುಣಸೂರು: ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ.ಅಧಿಕಾರಿಗಳ ವಿರುದ್ದ ಕಿಡಿ ಕಾರಿದ ನಿವಾಸಿಗಳು.

ಗುಂಡಿ ಬಿದ್ದ ರಸ್ತೆಯಲ್ಲಿ ನಾಟಿ ಮಾಡಿ ಹುಣಸೂರಿನ ನಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಹುಣಸೂರು ಹನಗೂಡು ರಸ್ತೆಯಲ್ಲಿ ನಾಟಿ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಂಡಿ ಬಿದ್ದ ರಸ್ತೆಯಲ್ಲಿ ವಾಹನ ಸಂಚಾರ ದುಃಸ್ಥರವಾಗಿದೆ.ಮಳೆ ಬಂದಲ್ಲಿ ಕೆರೆಗಳಂತಾಗುವ ಗುಂಡಿಗಳಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗಿದೆ ಎಂದು ಆರೋಪಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ರಸ್ತೆಗಳ ಗುಂಡಿಗಳನ್ನು ಮುಚ್ಚಲು ಒತ್ತಾಯಿಸಿ ಗಿಡ ನೆಡುವುದರ ಮುಖಾಂತರ ಪ್ರತಿಭಟನೆ ನಡೆಸಿದರು. ಅಧ್ಯಕ್ಷ ವಕೀಲ ಪುಟ್ಟರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಂತರ ಮಾತನಾಡಿದ ಪುಟ್ಟರಾಜುರವರು ರಾಜ್ಯ ಸರ್ಕಾರವು ವಿರೋಧ ಪಕ್ಷಗಳ ಕ್ಷೇತ್ರಗಳಿಗೆ ಯಾವುದೇ ಅನುದಾನಗಳನ್ನು ಸಮರ್ಪಕ ರೀತಿಯಲ್ಲಿ ನೀಡದೆ ತಾರತಮ್ಯ ವನ್ನು ಅನುಸರಿಸುತ್ತಿರುವದರಿಂದ ಈ ರೀತಿಯ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿವೆ, ಎಂದು ಆರೋಪಿಸಿದರು ಮತ್ತು ಈ ಕೂಡಲೇ ವಿರೋಧ ಪಕ್ಷಗಳಿರುವಂತಹ ಕ್ಷೇತ್ರಗಳಿಗೆ ಅಭಿವದ್ಧಿಗೆ ಬೇಕಾದಂತಹ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕಾಗಿ ಒತ್ತಾಯಿಸಿದರು.

ಗುಂಡಿಗಳಲ್ಲಿ ನಿಲ್ಲುವ ನೀರಿನಿಂದ ರೋಗರುಜನೆಗಳು ಉತ್ಪತ್ತಿಯಾಗಲು ಕಾರಣವಾಗಿರುವುದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸ ಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಗೆ ದೀಪಕ್ ರಂಜಿತ್. ಮಹೇಶ್ ರಾಜೇಶ್. ಮೋನಿಷ್ ನವೀನ್ ಕುಮಾರ್ ಸೇರಿದಂತೆ ಪ್ರತಿಭಟನೆಗೆ ವಿದ್ಯಾರ್ಥಿಗಳು ಸಾಥ್ ನೀಡಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *