ಬೆಂಗಳೂರು: “ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 ಪೂರ್ಣ ಅನುಷ್ಠಾನ. ಮುಂದಿನ ಶೈಕ್ಷಣಿಕ (2023-24)ವರ್ಷದಿಂದ ಈ ಶಿಕ್ಷಣ ವ್ಯವಸ್ಥೆ ಪ್ರಾರಂಭ”.

ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2023-24 )ರಾಷ್ಟ್ರೀಯ ಶಿಕ್ಷಣ ನೀತಿ -2020′ ಅನುಷ್ಠಾನಗೊಳ್ಳಲಿದ್ದು,3 ವರ್ಷ ಮೇಲ್ಪಟ್ಟ ಮಕ್ಕಳ ಬಾಲ್ಯ ಪೂರ್ವ ಹಾರೈಕೆ ಮತ್ತು ಶಿಕ್ಷಣವನ್ನು ರಾಜ್ಯದ 20,000 ಅಂಗನವಾಡಿಗಳು ಶಾಲೆಗಳಲ್ಲಿ ಅನುಷ್ಠಾನಗೊಳ್ಳಲಿದೆ .
ಎಂದು ಶಾಲಾ ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದರು.
ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯಲ್ಲಿ ಗುರುವಾರ( ಆ 24) ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರು ,ಎನ್ ಇಪಿ 2020 ಅನುಷ್ಟಾನ ಕುರಿತು ಮಾಹಿತಿ ನೀಡಿದರು.
‘ದೇಶದ ಪ್ರತಿ ಮಗುವಿಗೆ ಗುಣಮಟ್ಟ ಶಿಕ್ಷಣ ನೀಡಬೇಕು ಅದಕ್ಕೆ ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ, ಬದಲಾವಣೆ ತರಲಿರುವ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಟಾನಗೊಳಿಸಲಿರುವ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ್ದು, ಮುಂದಿನ ವರ್ಷದಿಂದಲೇ ಎನ್ ಇಪಿ -2020 ಪ್ರಕಾರ, ಬುನಾದಿ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಎನ್ಇಪಿ- 2020 ರ ಪ್ರಕಾರ, ‘ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣ’ ಪಠ್ಯಕ್ರಮ ಚೌಕಟ್ಟು ರಚನೆಗೆ 6 ಸಮಿತಿಗಳನ್ನು ರಚಿಸಲಾಗಿದೆ. ‘ಪಠ್ಯಕ್ರಮ ವಿನ್ಯಾಸ’, ‘ಪಠ್ಯಕ್ರಮ ಬೋಧನಾ ಮತ್ತು ಕಲಿಕಾ ಸಾಮಗ್ರಿಗಳು ಹಾಗೂ ಮೌಲ್ಯಮಾಪನ’, ‘ಸಾಮರ್ಥ್ಯ ಅಭಿವೃದ್ಧಿ’, ‘ಸಮುದಾಯ ತಲುಪುವಿಕೆ’, ‘ಮಗುವಿಗೆ ಆರಂಭಿಕ ಉತ್ತೇಜನ’, ‘ಮೇಲ್ವಿಚಾರಣೆ ಮತ್ತು ಉಸ್ತವಾರಿ ವಿಷಯ’ ಸೇರಿ ಒಟ್ಟು 6 ಸಮಿತಿಗಳು ಪಠ್ಯಕ್ರಮ ಚೌಕಟ್ಟಿಯನ್ನು ಸಿದ್ಧಪಡಿಸಿವೆ .
ಕೇಂದ್ರ ಶಿಕ್ಷಣ ಇಲಾಖೆಯಿಂದ ಇದೆ ಸೆಪ್ಟೆಂಬರ್ ನಲ್ಲಿ ಅಂತಿಮ ಪಠ್ಯಕ್ರಮ ಚೌಕಟ್ಟು ಲಭ್ಯವಾಗುವ ನೀರಿಕ್ಷೆ ಇದೆ .ಬಳಿಕ ರಾಜ್ಯದ ಪಠ್ಯಕ್ರಮ ಚೌಕಟ್ಟನ್ನು ಅಂತಿಮಗೊಳಿಸಲಾಗುತ್ತದೆ. ಪಠ್ಯಕ್ರಮ ಚೌಕಟ್ಟಿಗೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯ ತರಬೇತಿಯನ್ನು ಡಿಎಸ್ಇಆರ್‌ಟಿ ಮೂಲಕ ಶಿಕ್ಷಣ ಇಲಾಖೆಯ ಅಧೀನದ ಸಂಸ್ಥೆಗಳಲ್ಲಿ ನೀಡಲಾಗುತ್ತದೆ ‘ಎಂದು ಸಚಿವರು ಮಾಹಿತಿ ನೀಡಿದರು.
ಎನ್ಇಪಿ 2020 ಪರಿಣಾಮಕಾರಿ ಅನುಷ್ಠಾನಕ್ಕಾಗಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಜ್ಞರ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ, ಎಂದು ಸಚಿವರು ತಿಳಿಸಿದರು.

ವರದಿ: ಸಿಂಚನ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



