ಸ್ವತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರವು ಅವರನ್ನು ಸ್ಮರಿಸುತ್ತದೆ.
ಇಂದು ಜನವರಿ 23 ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನ . ಮಹಾನ್ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ರಾಷ್ಟ್ರವು ಕೃತಜ್ಞತೆಯಿಂದ ಸ್ಮರಿಸುತ್ತದೆ.
1897 ರಲ್ಲಿ ಇದೇ ದಿನ ನೇತಾಜಿ ಒಡಿಶಾದ ಕಟಕ್ನಲ್ಲಿ ಜನಿಸಿದರು. ಈ ದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತದೆ.
ನೇತಾಜಿಯವರಂತೆ ಪ್ರತಿಕೂಲ ಪರಿಸ್ಥಿತಿಯಲ್ಲಿ ಸ್ಥೈರ್ಯದಿಂದ ವರ್ತಿಸಲು ಮತ್ತು ಅವರಲ್ಲಿ ದೇಶಭಕ್ತಿಯ ಉತ್ಸಾಹವನ್ನು ತುಂಬಲು ದೇಶದ ಜನರನ್ನು ವಿಶೇಷವಾಗಿ ಯುವಜನರನ್ನು ಪ್ರೇರೇಪಿಸಲು ಜನವರಿ 23 ಅನ್ನು ಪ್ರತಿ ವರ್ಷ ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತದೆ.
ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



