ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ಪ್ರತಿಷ್ಠಿತ DG & IGP Commendation Disc 2025–26 ಗೌರವ
ಹಿಂದ್ ಸಮಾಚಾರ ನ್ಯೂಸ್ ಡೆಸ್ಕ್ | ಶಿವಮೊಗ್ಗ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅತ್ಯುನ್ನತ ಗೌರವಗಳಲ್ಲಿ ಒಂದಾದ ಪ್ರತಿಷ್ಠಿತ ‘DG & IGP Commendation Disc 2025–26’ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಇಬ್ಬರು ದಕ್ಷ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಇದು ಜಿಲ್ಲೆಯ ಪೊಲೀಸ್ ಪಡೆಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ (Addl. SP)
ಶ್ರೀ ಕಾರಿಯಪ್ಪ ಎ.ಜಿ. ಹಾಗೂ ಡಿ.ಎ.ಆರ್. ಪೊಲೀಸ್ ಉಪಾಧೀಕ್ಷಕರಾದ (DySP) ಶ್ರೀ ದಿಲೀಪ್ ಎಸ್.ವಿ. ಅವರು ಈ ಅತ್ಯುನ್ನತ ಗೌರವಕ್ಕೆ ಭಾಜನರಾದ ಅಧಿಕಾರಿಗಳಾಗಿದ್ದಾರೆ.
ಪೊಲೀಸ್ ಸೇವೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ, ಕಾನೂನು ಸುವ್ಯವಸ್ಥೆ ಪಾಲನೆ, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕ ಸೇವೆಯಲ್ಲಿ ತೋರಿದ ಅಪ್ರತಿಮ ಬದ್ಧತೆ, ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು (DG & IGP) ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಿ ಗೌರವಿಸುತ್ತಾರೆ.

ಶಿವಮೊಗ್ಗ ಜಿಲ್ಲೆಯ ಈ ಇಬ್ಬರು ಜನಪ್ರಿಯ ಅಧಿಕಾರಿಗಳು ಈ ಗೌರವಕ್ಕೆ ಪಾತ್ರರಾಗಿರುವುದು ಜಿಲ್ಲಾ ಪೊಲೀಸ್ ಇಲಾಖೆಯ ಉನ್ನತ ಕಾರ್ಯಕ್ಷಮತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸಾಧನೆಗೆ ಇಲಾಖೆಯ ಸಹೋದ್ಯೋಗಿಗಳು, ಸಾರ್ವಜನಿಕರು ಹಾಗೂ ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ
ಶ್ರೀ ಶ್ರೀನಿವಾಸ ಗೌಡ ಮತ್ತು ರಾಜ್ಯ ಉಪಾಧ್ಯಕ್ಷರಾದ
ಶ್ರೀ ಪ್ರದೀಪ್ ಮೀತ್ತಲ್ ಅವರು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದ್ ಸಮಾಚಾರ ನ್ಯೂಸ್ ವತಿಯಿಂದ ಸಾಧಕ ಅಧಿಕಾರಿಗಳಾದ
ಶ್ರೀ ಕಾರಿಯಪ್ಪ ಎ.ಜಿ. ಹಾಗೂ ಶ್ರೀ ದಿಲೀಪ್ ಎಸ್.ವಿ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮುಂದಿನ ಸೇವಾ ಜೀವನವು ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ.


