ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ: ಸಿದ್ದರಾಮಯ್ಯ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿಚಾರವಾಗಿ ವಿಪಾಕ್ಷ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯವರು ಹೇಳುವ ಸತ್ಯವನ್ನು ಎದುರಿಸಲಾಗದೆ, ಮೋದಿ ಸರಕಾರ ಲೋಕಸಭಾ ಸದಸ್ಯತ್ವದಿಂದ ಅವರನ್ನು ಅನರ್ಹಗೊಳಿಸಿ ಹೇಡಿತನವನ್ನು ಪ್ರದರ್ಶಿಸಿದೆ.

ಭಾರತೀಯ ಜನತಾ ಪಕ್ಷದ ನಡೆಗೆ ಹೆದರುವ ಅಥವಾ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ. ಬಿಜೆಪಿ ಪಕ್ಷದ ಪಾಪದ ಕೊಡ ತುಂಬಿದ್ದು, ತನ್ನ ನಾಶದ ಶವ ಪೆಟ್ಟಿಗೆಗೆ ತಾನೇ ಕೊನೆ ಮೊಳೆ ಬಡಿದಿದೆ ಎಂದು ಕಿಡಿ ಕಾರಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655



