“ಭಾರತ್ ಜೋಡೋ ಯಾತ್ರೆ”

ಟಿ.ನರಸೀಪುರ: ಭಾರತ್ ಜೋಡೋ ಯಾತ್ರೆ.

ಬಿಜೆಪಿಯ ದುರಾಡಳಿತದಿಂದ ದೇಶದ ಜನತೆ ನಲುಗಿ ಹೋಗಿದ್ದು,ಅವರ ಆಡಳಿತ ವೈಫಲ್ಯವನ್ನು ದೇಶದ ಜನತೆಗೆ ತಿಳಿಸಲು ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಇಡೀ ದೇಶದಲ್ಲಿ ಪಾದಯಾತ್ರೆಯ ಮೂಲಕ ತಿಳಿಸಲು ಚಾಲನೆ ನೀಡಲಾಗಿದೆ. ಎಂದು ವರುಣಾ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಟಿ.ನರಸೀಪುರ ಹಾಗೂ ವರುಣಾ ವಿಧಾನ ಸಭಾ ಕ್ಷೇತ್ರದ ವತಿಯಿಂದ ಆಯೋಜಿಸಿದ್ದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಟಿ.ನರಸೀಪುರ ಹಾಗೂ ವರುಣಾ ವಿಧಾನ ಸಭಾ ಕ್ಷೇತ್ರಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗೆ ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *