🏆 ತುಂಗಾ ಪ್ರೌಢಶಾಲೆಗೆ ಶೇ.100 ಫಲಿತಾಂಶ
ಹಿಂದ್ ಸಮಾಚಾರ್ ನ್ಯೂಸ್ ಡೆಸ್ಕ್ | ಶಿವಮೊಗ್ಗ | ಏಪ್ರಿಲ್ 2026
ಶಿವಮೊಗ್ಗ: ನಗರದ ವಿದ್ಯಾನಗರದಲ್ಲಿರುವ ತುಂಗಾ ಪ್ರೌಢಶಾಲೆಯು ಈ ವರ್ಷದ ಪರೀಕ್ಷೆಯಲ್ಲಿ ಶೇಕಡಾ 100ರಷ್ಟು ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.

ಶಾಲೆಯ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಇಬ್ಬರು ವಿದ್ಯಾರ್ಥಿಗಳು 500ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲೆಯ ಗುಣಾತ್ಮಕ ಶಿಕ್ಷಣದ ಫಲಿತಾಂಶವಾಗಿ ಸಂಸ್ಥೆ A ಗ್ರೇಡ್ ಪಡೆದುಕೊಂಡಿದೆ. ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಶ್ರೀನಿವಾಸ್ ಕರಿಯಣ್ಣ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.




