ಮೈಸೂರು : ನಮ್ಮನ್ನು ಅಗಲಿದ ರಾಜ್ಯದ ಅರಣ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ ಕತ್ತಿ ರವರ ಭಾವಚಿತ್ರ ಹಿಡಿದು ಮೇಣದ ಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು.

ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಮಂಡಿಮೊಹಲ್ಲಾ ನಿವಾಸಿ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ
ಪಂಚಮುಖಿ ಆಂಜನೇಯ ದೇವಸ್ಥಾನ ಮುಂಭಾಗ ನಮ್ಮನ್ನು ಅಗಲಿದ ರಾಜ್ಯದ ಅರಣ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ ಕತ್ತಿ ರವರ ಭಾವಚಿತ್ರ ಹಿಡಿದು ಮೇಣದ ಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು.
ಸಂತಾಪ ಸಭೆ ಉದ್ದೇಶಿಸಿ ಮಾತನಾಡಿದ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ರಾಜ್ಯ ಕಳೆದುಕೊಂಡಿದೆ. ಉಮೇಶ್ ಕತ್ತಿ ಅವರ ಕುಟುಂಬಕ್ಕೆ ಹಾಗೂ ಬೆಂಬಲಿಗರಿಗೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ನುಡಿನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ,ಕೇಬಲ್ ವಿಜಿ ,ಸೂರಜ್ ,ಸದಾಶಿವ್,ಗೋಪಾಲ್ ,ಶಿವಾಜಿ ,ಸ್ವಾಮಿ ,ಮಧು ,ಸುಧೀರ್ ,ಸತೀಶ್ ,ಪಂಕಜ್ ಪರಿಯಾರ್ ,ಚಿರು ,ಪ್ರಭು, ಹಾಗೂ ಆಟೋ ಚಾಲಕರು ಹಾಗೂ ರಸ್ತೆ ಬದಿ ವ್ಯಾಪಾರಿಗಳು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು.
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

