ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನಗಳ ವಿತರಣೆ
ಹಿಂದ್ ಸಮಾಚಾರ ಸುದ್ದಿ | ಮಾರ್ಚ್ 2026:
ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಬುಧವಾರ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಆಯೋಜಿಸಲಾದ ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನಗಳ ವಿತರಣೆ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು. ಈ ಯೋಜನೆಯ ಉದ್ದೇಶ ಸ್ವ ಉದ್ಯೋಗವನ್ನು ಉತ್ತೇಜಿಸುವುದು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೆರವು ನೀಡುವುದಾಗಿದೆ.

ಈ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಎಂ.ಸಿ. ಸುಧಾಕರ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಾಸಿರ್ ಹುಸೇನ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹಾಗೂ ಶಾಸಕರಾದ ಕೋನರಡ್ಡಿ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸರ್ಕಾರದ ಈ ಯೋಜನೆ ಸಮಾಜದ ವಿವಿಧ ವರ್ಗಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

ವರದಿ : ದಿವ್ಯಾ ಸಿಸಿಲ್



