ದೆಹಲಿ: ಉಪರಾಷ್ಟ್ರಪತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕಾರ : ಜಗದೀಪ್ ಧನಕರ್

ಭಾರತದ 14ನೇ ಉಪರಾಷ್ಟ್ರಪತಿಗಳಾಗಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ ಬೆಳಗ್ಗೆ 11:45ಕ್ಕೆ ದೆಹಲಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೂ ಮುನ್ನ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಬಳಿಕ ರಾಷ್ಟ್ರಪತಿ ಭವನ ತಲುಪಲಿದ್ದಾರೆ, ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಗದೀಪ್ ಧನಕರ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ,ಕೇಂದ್ರ ಸಚಿವರು ,ಸಂಸದರು ಹಾಗೂ ಇತರೆ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ

ವರದಿ: ಸಿಸಿಲ್ ಸೋಮನ್ (C E O – HIND SAMACHAR

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555



