ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗೆ ಆತ್ಮೀಯ ಸ್ವಾಗತ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗೆ ಆತ್ಮೀಯ ಸ್ವಾಗತ

ಹಿಂದ್ ಸಮಾಚಾರ ನ್ಯೂಸ್ | ಮಾರ್ಚ್ 2026

ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಾದ
ಶ್ರೀ ಪ್ರಭುಲಿಂಗ ಕವಲಿಕಟ್ಟಿ IAS ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಅಭಿಷೇಕ್ ವಿ KAS ಅವರನ್ನು ಭೇಟಿ ಮಾಡಿ ಆತ್ಮೀಯವಾಗಿ ಶುಭಾಶಯಗಳನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಗೌರವಪೂರ್ಣವಾಗಿ ಸ್ವಾಗತಿಸಿದರು.
ಈ ಕಾರ್ಯಕ್ರಮದಲ್ಲಿ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಪ್ರದೀಪ್ ಮೀತ್ತಲ್, ರಾಜ್ಯ ಮಾಧ್ಯಮ ಮುಖ್ಯಸ್ಥರಾದ ಸಿಸಿಲ್ ಪಣಯಿಲ್ ಸೋಮನ್, ಜಿಲ್ಲಾ ಅಧ್ಯಕ್ಷರಾದ ಉಮೇಶ್ ವಿ, ಜಿಲ್ಲಾ ಉಪಾಧ್ಯಕ್ಷರಾದ ರವಿಕುಮಾರ್ ಎ ಆರ್, ಜೀವನ, ಜಿಲ್ಲಾ ಯುವ ಸಮಿತಿಯ ಅಧ್ಯಕ್ಷರಾದ ಸುಜಿತ್, ಉಪಾಧ್ಯಕ್ಷರಾದ ಚಂದ್ರಶೇಖರ್, ನಗರ ಸಮಿತಿ ಪ್ರಧಾನ ಕಾರ್ಯದರ್ಶಿ ಗೈಭನ್ ಖಾನ್, ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷರಾದ ಪ್ರಮೀಳ ಕೆ ಆರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲಾಡಳಿತದ ಸಾರ್ವಜನಿಕ ಸೇವೆ ಹಾಗೂ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯ ಸದಸ್ಯರು ಶ್ಲಾಘಿಸಿದರು. ಆಡಳಿತ ಮತ್ತು ಮಾನವ ಹಕ್ಕುಗಳ ಸಂಸ್ಥೆಗಳ ನಡುವಿನ ಸಮನ್ವಯವು, ನ್ಯಾಯ, ಪಾರದರ್ಶಕತೆ ಮತ್ತು ಉತ್ತಮ ಆಡಳಿತಕ್ಕೆ ಅತ್ಯಂತ ಮುಖ್ಯವೆಂದು ಅವರು ಅಭಿಪ್ರಾಯಪಟ್ಟರು.

ಈ ವೇಳೆ ಸಾರ್ವಜನಿಕ ಸಮಸ್ಯೆಗಳು, ದೂರು ನಿವಾರಣೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆಯಿತು. ಜಿಲ್ಲಾಧಿಕಾರಿಗಳು ಸಮಿತಿಯ ಕಾರ್ಯಗಳನ್ನು ಮೆಚ್ಚಿ, ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಕಾರ್ಯಕ್ರಮವು ನಾಗರಿಕರ ಹಕ್ಕುಗಳ ರಕ್ಷಣೆ ಮತ್ತು ಸಮಗ್ರ ಕಲ್ಯಾಣಕ್ಕಾಗಿ ಸಂಸ್ಥೆಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Leave a Reply

Your email address will not be published. Required fields are marked *