ವರ್ಲ್ಡ್ ಕಿಕ್ ಬಾಕ್ಸಿಂಗ್ ನಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದ ಪರೀಕ್ಷಿತ್ ಪ್ರದೀಪ್ ರವರಿಗೆ ಅಭಿನಂದನಾ ಸಮಾರಂಭ
ಮೈಸೂರು: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಇತ್ತೀಚಿಗೆ ಜರ್ಮನಿಯಲ್ಲಿ ನಡೆದ ವರ್ಲ್ಡ್ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಎದ್ದು ದೇಶಕ್ಕೆ ಕೀರ್ತಿ ತಂದಿದ ಪರೀಕ್ಷಿತ್ ಪ್ರದೀಪ್ ರವರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ನವಂಬರ್ 10 ರಂದು ಸಂಜೆ 6:30 ಗಂಟೆಗೆ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರೌಂಡ್ ಹೋಟೆಲ್ ನಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಸಿ ಎನ್ ಮಂಜೇಗೌಡ, ಮಹಾಪೌರರಾದ ಶಿವಕುಮಾರ್, ಮಾಜಿ ಶಾಸಕರಾದ ಎಲ್ ನಾಗೇಂದ್ರ,
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಉದ್ಯಮಿ ಸ್ವೀಟ್ ಮಹೇಶ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ, ನಗರಪಾಲಿಕ ಸದಸ್ಯರಾದ ಬಿ ವಿ ಮಂಜುನಾಥ್, ಮಾ ವಿ ರಾಮ್ ಪ್ರಸಾದ್, ಪ್ರಮೀಳಾ ಭರತ್, ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು
ವರದಿ :ನಂದಿನಿ ಮೈಸೂರು

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 204

